ಕೋಲಾರ ನಗರದ ಬಸ್ ನಿಲ್ದಾಣದ ವೃತ್ತದಲ್ಲಿ ಅಕ್ಟೋಬರ್ 17ರಂದು ಸಂಫ ಪರಿವಾರದ ಪ್ರತಿಕೃತಿ ದಹಿಸುವ ಮೂಲಕ ಪ್ರತಿಭಟನೆ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಗಾಂಧಿನಗರ ನಾರಾಯಣಸ್ವಾಮಿರವರು “ಬಿಜೆಪಿ ಮತ್ತು ಆರ್.ಎಸ್.ಎಸ್. ಮಂದಿ ಜನಪರವಾಗಿ ಹೋರಾಟ ನಡೆಸುತ್ತಿರುವ ಕಮ್ಯೂನಿಸ್ಟರನ್ನು ಗುರಿಯಾಗಿಸಿಕೊಂಡು ಹಲ್ಲೆಗೆ ಮುಂದಾಗಿದ್ದಾರೆ. ಸೈದ್ಧಾಂತಿಕವಾಗಿ ಎದುರಿಸಲಾಗದವರು, ಕಛೇರಿ ಮೇಲೆ ದಾಳಿ, ಕಾರ್ಯಕರ್ತರನ್ನು ಕೊಲ್ಲುವ ಮೂಲಕ ಹಲ್ಲೆಗೆ ಮುಂದಾಗಿದ್ದಾರೆ ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ಮುಖಂಡರಾದ ಆರ್ಜುನನ್, ಪಿ.ಶ್ರೀನಿವಾಸ್, ಟಿ.ಎಂ.ವೆಂಕಟೇಶ್, ಪಿ.ಆರ್.ಸೂರ್ಯನಾರಾಯಣ, ಎ.ಆರ್.ಬಾಬು, ಪಿ.ವಿ.ರಮಣ, ಸುಶೀಲ, ಗಾಯತ್ರಿ ಮುಂದಾವರು ಪಾಲ್ಗೊಂಡಿದ್ದರು.
ಆದರೆ ಇದೇ ಸಂದರ್ಭದಲ್ಲಿ ಬೆಂಗಳೂರಿನ ಆರ್.ಎಸ್.ಎಸ್. ಕಾರ್ಯಕರ್ತ ಕೊಲೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕೋಲಾರ ನಗರದ ಬಸ್ ನಿಲ್ದಾಣದಲ್ಲಿ ಅದೇ ದಿನ ಪ್ರತಿಭಟನೆ ನಡೆಸಿದ್ದಾರೆ. ಸಿಪಿಐ(ಎಂ) ನೇತೃತ್ವೆದಲ್ಲಿ ಪ್ರತಿಕೃತಿ ದಹಿಸಿ ಪ್ರತಿಭಟಿಸಲಾಗಿತ್ತು. ಆದೇ ಪ್ರತಿಕೃತಿ ದಹನ ಮುಂಭಾಗ ಮುಖ್ಯಮಂತ್ರಿಗಳ ಪ್ರತಿಕೃತಿ ದಹನ ಮಾಡಲಾಗಿದೆ ಎಂದು ಫೋಟೋಗಳಿಗೆ ಫೋಸು ಕೊಟ್ಟು ಮರು ದಿನದ ಪತ್ರಿಕೆಗಳಲ್ಲಿ ಪ್ರಕಟಿಸಿಕೊಂಡಿದ್ದಾರೆ!