ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ 12, 1863 ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ.
ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ರಂದು ರಾಷ್ಟ್ರೀಯ “ಯುವದಿನ”ವೆಂದು ಆಚರಿಸಲಾಗುತ್ತದೆ.
ಜನನ | 12 ಜನವರಿ 1863 ಕಲ್ಕತ್ತಾ, ಬಂಗಾಳ ಪ್ರೆಸಿಡೆನ್ಸಿ, ಬ್ರಿಟಿಷ್ ಇಂಡಿಯಾ. (ಈಗ ಕೋಲ್ಕತಾ, ಪಶ್ಚಿಮ ಬಂಗಾಳ, ಭಾರತ) |
---|---|
ಮರಣ | 4 ಜುಲೈ 1902 (ತೀರಿದಾಗ ವಯಸ್ಸು ೩೯) ಬೇಲೂರು ಮಠ, ಬಂಗಾಳ ಪ್ರಾಂತ್ಯ, ಬ್ರಿಟಿಷ್ ಇಂಡಿಯಾ (ಈಗ ಪಶ್ಚಿಮ ಬಂಗಾಲ, ಭಾರತ) |
ಜನ್ಮ ನಾಮ | ನರೇಂದ್ರನಾಥ ದತ್ತ |
Founder of | ಬೇಲೂರು ಮಠ, ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ |
ಗುರು | ರಾಮಕೃಷ್ಣ ಪರಮಹಂಸ |
ಸಾಹಿತ್ಯದ ಕೆಲಸಗಳು | ರಾಜ ಯೋಗ, ಕರ್ಮ ಯೋಗ,ಭಕ್ತಿ ಯೋಗ ಮತ್ತು ಜ್ಞಾನ ಯೋಗ |
ನುಡಿ | ಏಳು ಎದ್ದೇಳು, ಗುರಿ ಮುಟ್ಟುವ ತನಕ ನಿಲ್ಲದಿರಿ. |
ಸ್ವಾಮಿ ವಿವೇಕಾನಂದರು ಒಬ್ಬ `ದಡ್ಡ~ ವಿದ್ಯಾರ್ಥಿಯಾಗಿದ್ದರು. `ವಿದ್ಯಾರ್ಥಿಗಳಿಗೆ ಬೋಧಿಸಲು ಬರುವುದಿಲ್ಲ~ ಎಂಬ ಕಾರಣಕ್ಕೆ ಶಿಕ್ಷಕನ ಉದ್ಯೋಗ ಕಳೆದುಕೊಂಡಿದ್ದರು.
ಹುಟ್ಟಿನಿಂದಲೇ ರೋಗಿಷ್ಠರಾಗಿದ್ದ ಅವರು ಸಾಯುವ ಹೊತ್ತಿಗೆ ಒಂದೆರಡಲ್ಲ, ಮೂವತ್ತೊಂದು ಬಗೆಯ ರೋಗಗಳಿಂದ ಬಳಲಿ ಹೋಗಿದ್ದರು. ಎಲ್ಲ ಬಂಗಾಳಿಗಳಂತೆ ಅವರೊಬ್ಬ ಮಹಾ ತಿಂಡಿಪೋತರಾಗಿದ್ದರು.
ಜೀವನದ ಕೊನೆಯ ದಿನದವರೆಗೂ ಅವರು ಮಾಂಸಾಹಾರಿ ಆಗಿದ್ದರು. ಜತೆಗೆ ದೇಶ-ವಿದೇಶದ ಮಾಂಸಾಹಾರಿ ಅಡುಗೆಯನ್ನು ಮಾಡುವ ಪಾಕಪ್ರಾವೀಣ್ಯತೆ ಹೊಂದಿದ್ದರು. ವ್ಯಸನಿಯಂತೆ ಸಿಗರೇಟ್-ಹುಕ್ಕಾ ಸೇದುವ ಧೂಮಪಾನಿಯಾಗಿದ್ದರು. ಹಿಂದೂ, ಮುಸ್ಲಿಮ್, ಕ್ರಿಶ್ಚಿಯನ್ ಎಲ್ಲರ ಮನೆಯಲ್ಲಿ ಭೇದ ಇಲ್ಲದೆ ಊಟ ಮಾಡುತ್ತಿದ್ದರು.
ಕೃಪೆ : ದಿನೇಶ್ ಅಮಿನ್ ಮಟ್ಟುರವರು ಪ್ರಜಾವಾಣಿಯಲ್ಲಿ ಬರೆದ ಲೇಖನ ಲೇಖನ
http://www.prajavani.net/news/article/2012/01/16/132547.html