ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ವತಿಯಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ರಾಕೀಯ ಸಮಾವೇಶವು ಹೊಸಕೋಟೆಯಲ್ಲಿ ನಡೆಯಿತು.
ಸಮಾವೇಶದಲ್ಲಿ ಸಿಪಿಐ(ಎಂ) ಅಭ್ಯರ್ಥಿ ಎಸ್.ವರಲಕ್ಷ್ಮಿ ಮಾತನಾಡಿ ʻಚುನಾವಣೆಯಲ್ಲಿ ರೈತರ ಸಮಸ್ಯೆಗಳ, ಕಾರ್ಮಿಕರ ಸಮಸ್ಯೆಗಳು, ವಿದ್ಯಾರ್ಥಿ-ಯುವಜನರ ಸಮಸ್ಯೆಗಳ ಬಗ್ಗೆ ಚರ್ಚೆಯಾಗುತ್ತಿಲ್ಲ. ದೇಶದಲ್ಲಿ ಜ್ವಲಂತ ಸಮಸ್ಯೆಯಾಗಿ ಕಾಡುತ್ತಿರುವ ನಿರುದ್ಯೋಗ, ಹಸಿವು, ಬಡತನದ ಬಗ್ಗೆ ಚರ್ಚೆಯಾಗುತ್ತಿಲ್ಲ. ಬದಲಾಗಿ ಜಾತಿ, ಧರ್ಮ, ಹಣದ ಬಗ್ಗೆ ಚರ್ಚೆ ನಡೆಯುತ್ತಿದೆ. ಮಾನವೀಯತೆ ಎತ್ತಿಯುಡಿಯುವವರನ್ನು ಜನರು ಇಂದು ಆಯ್ಕೆ ಮಾಡಬೇಕಾದ ತುರ್ತು ಇದೆ ಎಂದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಮೀನಾಕ್ಷಿ ಸುಂದರಂ, ಕೆ.ಪ್ರಕಾಶ್, ವಿ.ಗೀತಾ, ಚಂದ್ರತೇಜಸ್ವಿ, ಹರೀಂದ್ರ, ಲೀಲಾವತಿ ಸೇರಿದಂತೆ ಅನೇಕ ಮುಖಂಡರು ಹಾಗೂ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿದ್ದರು.