ಮಹಾರಾಷ್ಟ್ರದ ವರ್ಧಾದಲ್ಲಿರುವ ಮಹಾತ್ಮಾ ಗಾಂಧಿ ಅಂತರ್ರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದ ಅಧಿಕಾರಿಗಳು ಆರು ವಿದ್ಯಾರ್ಥಿಗಳನ್ನು ಉಚ್ಚಾಟಿಸಿರುವುದಕ್ಕೆ ಸಿಪಿಐ(ಎಂ) ಪೊಲಿಟ್ ಬ್ಯುರೊ ತನ್ನ ವಿರೋಧವನ್ನು ವ್ಯಕ್ತಪಡಿಸಿದೆ.
ಅವರು ಧರಣಿ ನಡೆಸಿದರು ಮತ್ತು ಸಾರ್ವಜನಿಕ ವಿಷಯದ ಮೇಲೆ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದರು ಎಂದು ವಿಧಾನಸಭಾ ಚುನಾವಣೆಗಳಿಂದಾಗಿ ಜಾರಿಯಲ್ಲಿರುವ ಮಾದರಿ ನೀತಿ ಸಂಹಿತೆಯ ಹೆಸರಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಮಾದರಿ ನೀತಿ ಸಂಹಿತೆ ಇರುವುದು ಚುನಾವಣಾ ಪ್ರಚಾರಕ್ಕೆ, ಅದರ ಹೆಸರಿನಲ್ಲಿ ಒಂದು ಕ್ಯಾಂಪಸ್ ಒಳಗಡೆ ಕ್ರಮಕೈಗೊಳ್ಳುವುದು ಸೋಗಲಾಡಿತನ ಮತ್ತು ಅಸಂಬದ್ಧ. ವಿಶ್ವವಿದ್ಯಾಲಯ ಅಧಿಕಾರಿಗಳು ವಿದ್ಯಾರ್ಥಿಗಳನ್ನು ಶಿಕ್ಷೆಗೆ ಗುರಿಪಡಿಸುವುದು ಪ್ರಜಾಪ್ರಭುತ್ವ-ವಿರೋಧಿ ಮತ್ತು ಮಹಾತ್ಮ ಗಾಂಧಿಯವರ ಹೆಸರಿಟ್ಟು ಕೊಂಡಿರುವ ಸಂಸ್ಥೆಯಲ್ಲಿ ಗಾಂಧೀಜಿ ಎತ್ತಿಹಿಡಿದಿದ್ದ ಎಲ್ಲ ಮೌಲ್ಯಗಳಿಗೆ ವಿರುದ್ಧವಾದದ್ದು. ಆದ್ದರಿಂದ ವಿದ್ಯಾರ್ಥಿಗಳನ್ನು ಉಚ್ಚಾಟಿಸಿರುವ ಆದೇಶವನ್ನು ತಕ್ಷಣವೇ ರದ್ದು ಮಾಡಬೇಕು ಎಂದು ಸಿಪಿಐ(ಎಂ) ಪೊಲಿಟ್ ಬ್ಯುರೊ ಆಗ್ರಹಿಸಿದೆ.