ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ), ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕ ಸಮಿತಿಯು ಇತ್ತೀಚಿಗೆ, ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದಲ್ಲಿ ನಡೆದ ಎರಡು ಗುಂಪಿನ ನಡುವೆ ಘರ್ಷಣೆಯಿಂದಾಗಿ ಸಾವುಗಳು ಸಂಭವಿಸಿದೆ. ಈ ಇಡೀ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕೆಂದು ಗಂಗಾವತಿ ತಹಶೀಲ್ದಾರ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಮನವಿ ಸಲ್ಲಿಸಿತು.
ಹಿಂಸಾಚಾರ ಘಟನೆಯಿಂದಾಗಿ ಸಾವುಗಳು ಸಂಭವಿಸಿವೆ. ಆದರೆ, ಇದೇ ಪ್ರಕರಣದಲ್ಲಿ ಬಾಳಪ್ಪ ಮತ್ತು ಸಣ್ಣ ಹನುಮಂತ ಇತರರ ಮೇಲೆ ಸುಳ್ಳು ಕೊಲೆ ಮೊಕದ್ದಮೆ ದಾಖಲಿಸಲಾಗಿದೆ. ಈ ಘಟನೆಯಿಂದಾಗಿ ಗ್ರಾಮದಲ್ಲಿ ಅಶಾಂತಿ ನಿರ್ಮಾಣವಾಗಿದೆ. ಬಂಧಿಸುವ ಭೀತಿಯಿಂದ ಗ್ರಾಮಸ್ಥರು ಗ್ರಾಮವನ್ನು ತೊರೆದಿದ್ದಾರೆ.
ವಯೊವೃದ್ದರ ಜೀವನ ನಿರ್ವಹಣೆ ಕಷ್ಟಕರವಾಗಿದೆ. ಧನ-ಕರುಗಳಿಗೆ ನೀರು ಕುಡಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಗ್ರಾಮದಲ್ಲಿ ಗಂಭೀರವಾದ ತೊಂದರೆ ತಲೆದೊರಿದೆ. ಈ ಪ್ರಕರಣವನ್ನು ಸಮಗ್ರವಾಗಿ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.
ನ್ಯಾಯಾಂಗ ತನಿಖೆ ಕೈಗೊಳ್ಳುವ ಮೂಲಕ ತಪ್ಪಿಸರ ಮೇಲೆ ಕ್ರಮ ಜರುಗಿಸಬೇಕು ಮತ್ತು ಅಮಾಯಕರಾದ ಬಾಳಪ್ಪ, ಸಣ್ಣ ಹನುಮಂತ ಇತರರು ಮೇಲೆ ಹಾಕಿರುವ ಸುಳ್ಳು ಪ್ರಕರಣವನ್ನು ಕೈಬಿಡಬೇಕೆಂದು ಒತ್ತಾಯಿಸಿದರು. ಈ ಕೆಳಗಿನ ಹಕ್ಕೊತ್ತಾಯಗಳನ್ನು ಇತ್ಯರ್ಥ ಪಡಿಸಬೇಕೆಂದು ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
- ಹುಲಿಹೈದರ ಗ್ರಾಮದಲ್ಲಿ ನಡೆದ ಕೊಲೆ, ಹಿಂಸಚಾರವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಿ ತಪ್ಪಿತಸ್ಥರನ್ನು ಬಂಧಿಸಬೇಕು.
- ಬಾಳಪ್ಪ ಮತ್ತು ಸಣ್ಣ ಹನುಮಂತ ಇತರ ವಿರುದ್ಧ ದಾಖಲೆಸಿರುವ ಸುಳ್ಳು ಪ್ರಕರಣ ಕೈ ಬಿಡಬೇಕು.
- ಈ ಪ್ರಕರಣದಲ್ಲಿ ಸಾವನ್ನಪ್ಪಿದ ಎರಡು ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ವಿತರಿಸಬೇಕು ಮತ್ತು ಗಾಯಾಳುಗಳಿಗೆ ಜಿಲ್ಲಾಡಳಿತ ಚಿಕಿತ್ಸೆಯನ್ನು ಕೊಡಿಸಬೇಕು.
- ಕೂಡಲೇ ಗ್ರಾಮದಲ್ಲಿ ಶಾಂತಿ ಸಭೆಯನ್ನು ಮಾಡಿ ಪರಿಸ್ಥಿತಿಯನ್ನು ತಿಳಿಗೊಳಿಸಬೇಕು.
ಗಂಗಾವತಿಯ ಉಪ ತಹಶೀಲ್ದಾರರ ಹೊರಪೇಟೆ ಸರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸುವ ಸಂದರ್ಭದಲ್ಲಿ ಸಿಪಿಐ(ಎಂ) ಪಕ್ಷದ ರಾಜ್ಯ ಸಮಿತಿ ಸದಸ್ಯ ಚಂದ್ರಪ್ಪ ಹೋಸ್ಕರ, ಜಿಲ್ಲಾ ಕಾರ್ಯದರ್ಶಿ ನಿರುಪಾದಿ ಬೆಣಕಲ್, ಜಿಲ್ಲಾ ಮುಂಖಡರಾದ ಬಸವರಾಜ ಮರಕುಂಬಿ, ಹುಸೇನಪ್ಪ, ಅಮರೇಶ ಕಡಗದ, ಮರಿನಾಗಪ್ಪ, ಶಿವಕುಮಾರ ಈಚನಾಳ, ಸೋಮನಾಥ, ಮುಕೇಶ, ಹನುಮಂತ ಹೋಸ್ಕರಿ ಇತರರು ಇದ್ದರು.